ಬೆಂಗಳೂರು : ದುಬೈ ನಿಂದ ಸುಮಾರು 14 ಕೆಜಿಗೂ ಅಧಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯ ರಾವ್ ಗೆ ಇದೀಗ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಒಂದು ಪ್ರಕರಣದಿಂದ ನಟಿ ರನ್ಯಾರಾವ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೌದು ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿದ್ದ ರನ್ಯಾ ರಾವ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
102 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ ಡಿಆರ್ಐ ಕೈಯಲ್ಲಿ ಲಾಕ್ ಆಗಿದ್ದರು. ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಇದೀಗ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ರನ್ಯಾ ರಾವ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಒಂದು ವರ್ಷ ಜೈಲು ವಾಸದ ಬಳಿಕ ಇದೀಗ ಜಾಮೀನು ಸಿಕ್ಕಿದ್ದು, ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ ಆಗಲಿದ್ದಾರೆ.
ಹೈಕೋರ್ಟ್ ಏಕಸದಸ್ಯ ಪೀಠ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ ಕಾಯ್ದೆ ಸೆಕ್ಷನ್ 3(1) ಅಡಿ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ರನ್ಯಾ ರಾವ್ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ. ಇದೀಗ ಒಂದು ವರ್ಷ ಜೈಲು ವಾಸದ ಬಳಿಕ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ. ಜಾಮಿನೊಸಿಕ ಹಿನ್ನೆಲೆಯಲ್ಲಿ ಇಂದು ಸಂಜೆ, ಜೈಲಿನಿಂದ ರನ್ಯಾರಾವ್ ಬಿಡುಗಡೆ ಆಗಬಹುದು.








