ಹೈದ್ರಾಬಾದ್ : ಹೈದರಾಬಾದ್ ನ ಸಂಧ್ಯಾ ಥೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಬಂಧನ ವಿಧಿಸಿ ನಾಂಪಲ್ಲಿ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದರು ಈ ಸಂಬಂಧ ನಟ ಅಲ್ಲು ಅರ್ಜುನ್, ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಅಲ್ಲು ಅರ್ಜುನ್ ಮನವಿ ಮಾಡಿದ್ದರು ವಿಚಾರಣೆ ನಡೆಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಡಿಸೆಂಬರ್ 4 ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು ಬಳಿಕ ಪೊಲೀಸರು ಅವರನ್ನು ನಾಪಲ್ಲಿ ಕೋರ್ಟಿಗೆ ಹಾಜರುಪಡಿಸಿದ್ದರು ಈ ವೇಳೆ 14 ದಿನ ನ್ಯಾಯಾಂಗ ಬಂದನ ವಿಧಿಸಿ ನಾಮಪಲ್ಲಿ ಕೋರ್ಟ್ ಆದೇಶ ನೀಡಿತು ಇದರ ಬೆನ್ನೆಲು ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.