ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಇಂದು ನಡೆಸಿತು. 

BREAKING: ‘ಸಂದೇಶಖಾಲಿ ಪ್ರಕರಣ’: ಬಂಗಾಳದ ಅಧಿಕಾರಿಗಳ ವಿರುದ್ಧ ಲೋಕಸಭೆ ಸಮಿತಿ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಇದೇ ವೇಳೆ ಹೈಕೋರ್ಟ್ ನೀಡಿದ್ದ ಖುದ್ದು ಹಾಜರಾತಿಗೆ ಸುಪ್ರಿಂಕೋರ್ಟ್‌ ತಡೆ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರ ಪರ ಸುಪ್ರಿಂಕೋರ್ಟ್‌ನಲ್ಲಿ ಕಪಿಲ್‌ ಸಿಬಲ್. ಮತ್ತು ಅಭಿಶೇಕ್‌ ಸಿಂಗ್ವಿ ಅವರ ವಾದವನ್ನು ಮಂಡಿಸಿದ್ದರು.ನೈತಿಕ ಹೊಣೆ ಹೊತ್ತು ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದರು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್‌ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.  ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್‌ ಇತ್ತೀಚೆಗೆ ವಜಾಗೊಳಿಸಿತ್ತು.

SHOCKING : ಕರ್ನಾಟಕದಲ್ಲಿ ಹೆಚ್ಚುತ್ತಿರುವ ‘ಸ್ತನ ಕ್ಯಾನ್ಸರ್’ ಪ್ರಕರಣ-ಸಾವಿನ ಸಂಖ್ಯೆ : ಅಂಕಿ ಅಂಶ ಬಹಿರಂಗಗೊಳಿಸಿದ NCRP

ಇನ್ನೂ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್‌, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯೂ ಆದ ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಅವರಿಗೆ ತಲಾ ₹ 10,000 ದಂಡ ವಿಧಿಸಿದ್ದ ಹೈಕೋರ್ಟ್‌, ಎಲ್ಲರೂ ‌ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು.

ಹಿಂದೂ ಧರ್ಮದ ಕುರಿತು ಶಿಕ್ಷಕಿ ಅವಹೇಳನಕಾರಿ ಹೇಳಿಕೆ ಕೇಸ್ : ಮಂಗಳೂರಲ್ಲಿ ಸರ್ಕಾರದ ವಿರುದ್ಧ VHP ಪ್ರತಿಭಟನೆ

Share.
Exit mobile version