ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಇಡೀ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದರು. ಈ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದರು. ಇದಿಗ ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ನ್ಯಾ.ಎಂ. ನಾಗಪ್ರಸನ್ನ ಮುಂದಿನ ವಿಚಾರಣೆಯವರೆಗೂ ಇಡಿ ನೀಡಿದ್ದ ಸಮನ್ಸ್ ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಫೆಬ್ರವರಿ 10ರವರೆಗೆ ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಸಿಎಂ ಪತ್ನಿ ಪಾರ್ವತಿ ಪರವಾಗಿ ಸಂದೇಶ್ ಚೌಟ ಅವರು ವಾದ ಮಂಡಿಸಿದರೆ, ಸಚಿವ ಭೈರತಿ ಸುರೇಶ್ ಅವರ ಪರವಾಗಿ ಸಿವಿ ನಾಗೇಶ್ ಅವರು ವಾದ ಮಂಡಿಸಿದರು. ಭೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸಿನ ಆರೋಪಿಯಲ್ಲ. ಆರೋಪಿ ಎಲ್ಲದಿದ್ದರೂ ಕೂಡ ಅವರಿಗೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಹಾಜರಾಗುವಂತೆ ಇಡಿ ಸೂಚಿಸಿತ್ತು. ಇದೇ ಮಾದರಿಯ ಮತ್ತೊಂದು ಕೇಸ್ ನಲ್ಲಿ ಹೈಕೋರ್ಟ್ ಸಮನ್ಸ್ ರದ್ದು ಪಡಿಸಲಾಗಿದೆ. ನಟೇಶ್ ಗೆ ನೀಡಿ ಈಡಿ ನೀಡಿದ ಸಮನ್ಸ್ ಅನ್ನು ಹೈಕೋರ್ಟ್ ರದ್ದು ಪಡಿಸಿದೆ. ಮುಂದಿನ ವಿಚಾರಣೆವರೆಗೂ ಇಡಿಯಿಂದ ರಕ್ಷಣೆ ಒದಗಿಸುವಂತೆ ಸಿ ವಿ ನಾಗೇಶ್ ಮನವಿ ಮಾಡಿದರು.
ಇನ್ನು ಇಡಿ ಪರವಾಗಿ ASG ಅರವಿಂದ ಕಾಮತ್ ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರಲಿಲ್ಲ.ಇಂದು ನಟೇಶ್ ಪರ ಆದೇಶ ಬಂದಿದೆ. ಆದರೆ ವಿವರ ತಿಳಿದಿಲ್ಲ ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟಿಗೆ ಇಡಿ ಪರ ವಕೀಲರು ಮನವಿ ಮಾಡಿದರು. ಸಿಎಂ ಕೇಸಿನ ವಿಚಾರಣೆ ನಡೆಯುವಾಗ ಇದರಲ್ಲಿ ಮುಂದುವರೆಯುತ್ತೀರಾ? ಎಂದು ಜಡ್ಜ್ ಪ್ರಶ್ನಿಸಿದರು. ಸಿಎಂ ಪತ್ನಿ ಪಾರ್ವತಿ ಅವರು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದಾರೆ. ಅವರ ಮೇಲೆ ಅಕ್ರಮವಾಗಿ ಸೈಟ್ಗಳನ್ನು ಪಡೆದ ಆರೋಪವಿದೆ. PMLA ಕಾಯ್ದೆಯ ಅಡಿ ಅನುಸೂಚಿತ ಕೇಸ್ ಇದೆ ಎಂದು ಇಡಿ ಪರ ಎ ಎಸ್ ಜಿ ಅರವಿಂದ್ ಕಾಮತ್ ವಾದಿಸಿದರು.
ಈ ವೇಳೆ ಹೈಕೋರ್ಟ್ ನ್ಯಾಯಾಧೀಶರಾದಂತಹ ಎಂ.ನಾಗಪ್ರಸನ್ನ ಅವರು, ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇಡಿ ತನಿಖೆಯಿಂದ ಹೈಕೋರ್ಟ್ ಕಾಯ್ದಿರಿಸಿದ ಕೇಸಿಗೆ ಹಾನಿಯಾಗಬಾರದು. ಸಿಎಂ ಪತ್ನಿ ಪಾರ್ವತಿ ರಿಟ್ ಅರ್ಜಿ ಸಂಬಂಧ ಇದೀಗ ಹೈಕೋರ್ಟ್ ಇಡಿ ಸಮನ್ಸ್ ಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ. ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ಕೋರ್ಟಿಗೆ ಅಂತಿಮ ವರದಿ ಸಲ್ಲಿಕೆಗೆ ಮುಂದೂಡಿದ್ದೇವೆ. ಇಡಿ ನಡಿಸುತ್ತಿರುವ ತನಿಖೆ ಲೋಕಾಯುಕ್ತ ಪೊಲೀಸ್ ಎಫ್ಐಆರ್ ಆಧರಿಸಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ನೋಟಿಸ್ನಲ್ಲಿ ಏನಿದೆ?
ಜ 9ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್ಗೆ ಪ್ರತಿಯಾಗಿ ಸಿಎಂ ಪತ್ನಿ ಪಾರ್ವತಿ ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ಕೋರಿದ್ದರು. ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ5 ನೀಡುವಂತೆ ಮನವಿ ಮಾಡಿದ್ದರು. ಇಡಿ ಸಿಎಂ ಪತ್ನಿಗೆ ಎರಡನೇ ನೋಟಿಸ್ ನೀಡಿತ್ತು. ಜನವರಿ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಹೇಳಲಾಗಿದೆ.
ಇಡಿ ಅಧಿಕಾರಿಗಳು ಮತ್ತೆ ಅಕ್ರಮ ಹಣ ವರ್ಗಾವಣೆ ಆ್ಯಕ್ಟ್ ಅಡಿಯಲ್ಲಿ ವಿ. ಮುರಳೀಕಣ್ಣನ್ ಹೆಸರಿನಲ್ಲಿ ಜನವರಿ 24ರಂದು ನೋಟಿಸ್ ನೀಡಿದ್ದಾರೆ. ಜನವರಿ 28 ರಂದು ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಕಚೇರಿಯಲ್ಲಿ ವಿಚಾರಣೆಗೆ ಖುದ್ದು ಹಾಜರಾಗಿ, ಪ್ರಕರಣ ಸಂಬಂಧ ಸಾಕ್ಷಿಗಳು ಮತ್ತು ದಾಖಲೆಗಳನ್ನು ಸಲ್ಲಿಸಿ ಎಂದು ಸಮನ್ಸ್ನಲ್ಲಿ ಉಲ್ಲೇಖಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈಗಾಗಲೆ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ಏಜೆಂಟ್ಗಳು ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.