ಬೆಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಈ ಒಂದು ‘FIR’ ರದ್ದುಗೊಳಿಸುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪ್ರಭಾಕರ್ ಭಟ್ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದ ಮಂಡಿಸಲಾಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯ ಪೀಠವು, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೆ ದೋಷಾರೋಪ ಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾ.ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.