ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ.
ಹೌದು 2022 ನವೆಂಬರ್ 9 ರಂದು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣವನ್ನು ರದ್ದುಗೊಳಿಸಿದೆ.
ಸತೀಶ್ ಜಾರಕಿಹೊಳಿ ಹೇಳಿದ್ದೇನು?
‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸಚ್ಚುವ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು.