ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ಜಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ.








