ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.
ಮಹಿಳೆ ಅಭರಣ ಪ್ರಕರಣದಲ್ಲಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದೆ.
ಹಾಗಾಗಿ ನಾಳೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಬಿಡುಗಡೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲವು ಕಾನೂನು ಪ್ರಕ್ರಿಯೆಗಳು ಇರಲಿದ್ದು, ಹಾಗಾಗಿ ನಾಳೆ ಎಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜಲ್ ನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಎಚ್ ಡಿ ರೇವಣ್ಣ ಅವರ ಪರವಾಗಿ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಅದೇ ರೀತಿಯಾಗಿ ಎಸ್ಐಟಿ ಪರವಾಗಿ ಜಾಯ್ನ ಕೊಥಾರಿ ವಾದ ಮಂಡಿಸಿದ್ದರು ಇದೀಗ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಎಚ್‌ಡಿ ರೇವಣ್ಣ ಅವರಿಗೆ 5 ಲಕ್ಷ ಬಾಂಡ್ ನೀಡಿ ಶರತ್ತು ಬದ್ಧ ಜಾಮೀನು ನೀಡಿದೆ