ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹೌದು ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಂಸ್ಥೆಯ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ ಗು ಇದೀಗ ಬಿಗ್ ರಿಲೀಸ್ ಸಿಕ್ಕಂತಾಗಿದೆ. ಚಿಂಚೋಳಿಯ ಜಿಎಂಎಫ್‌ಸಿ ಕೋರ್ಟ್ ನಲ್ಲಿ ಈ ಕುರಿತು ದೂರು ದಾಖಲಿಸಲಾಗಿತ್ತು.
ಪ್ರಕರಣದ ಹಿನ್ನೆಲೆ?
ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಆದೇಶ ನೀಡಲಾಗಿತ್ತು . ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಈ ಶುಗರ್ ಫ್ಯಾಕ್ಟರಿ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು.
ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಜನೆವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು.ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಹೈ ಕೋರ್ಟ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಕೇಸ್ ಸೇರಿದಂತೆ, ಸಿದ್ಧ ಸಿರಿ ಸೌಹಾರ್ದ ಸಹಕಾರಿ ನಿಯಮಿತ ವಿರುದ್ಧದ ದಾಖಲಾದ ಕೇಸ್ ಕೂಡ ರದ್ದುಗೊಳಿಸಿ ಆದೇಶ ಹೊರಡಿಸಿದೆ.