ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಸಂಬಂಧ ಬಿಜೆಪಿ ಎಂಎಲ್ ಸಿ ಎನ್. ರವಿಕುಮಾರ್ ಮಧ್ಯಂತರ ರಿಲೀಫ್ ಸಿಕ್ಕಿದೆ.
ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಕುರಿತ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಶಾಲಿನಿ ರಜನೀಶ್ ದೂರು ನೀಡಿಲ್ಲ 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಾಗಿದೆ. ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್ ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ ವಿವಾದ ಆಲಿಸಿದ ಹೈಕೋರ್ಟ್ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಪ್ರಶ್ನಿಸಿ ಎಂ ಎಲ್ ಸಿ ಎನ್ ರವಿಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು ಎನ್.ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಿತ್ತು.
ಇನ್ನೂ ಈ ಪ್ರಕರಣದಲ್ಲಿ ಎಂಎಲ್ ಸಿ ಎನ್.ರವಿಕುಮಾರ್ ಅವರಿಗೆ ಹೈಕೋರ್ಟ್ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ. ಈ ಮೂಲದ ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು.