ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ MLC ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೌದು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಎಂಎಲ್ಸಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.