ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಇದೀಗ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರಿಗೆ ಇದೀಗ ರಾಜ್ಯ ಸಾರಿಗೆ ಇಲಾಖೆಯು ಜನವರಿ 31 ರವರೆಗೆ ವಿಸ್ತರಿಸಿದೆ.
ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31 ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತು. ಕಳೆದ ಒಂದುವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಅಳವಡಿಕೆ ಮಾಡಲಾಗಿದೆ ಅಲ್ಲದೆ ಇನ್ನೂ 1.40 ಕೋಟಿ ಹಳೆಯ ವಾಹನಗಳು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ.