ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಜನವರಿ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದ್ದು, ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿತ್ತು.
ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್ಪಿ ಆಳವಡಿಕೆ ಮಾಡಲಾಗಿದೆ. ಇನ್ನೂ 1.44 ಕೋಟಿ ಹಳೆಯ ವಾಹನಗಳು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಬೇಕಿದೆ.