ಬೆಂಗಳೂರು : ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಲಂಚದ ಆಮೀಷ ನೀಡಿದ ಆರೋಪದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿತ್ತು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಕೆ. ಸುಧಾಕರ್ ವಿರುದ್ಧ ಪ್ರಕರಣಕ್ಕೆ ತಡೆ ನೀಡಿದೆ. ಈ ಮೂಲಕ ಸಂಸದ ಸುಧಾಕರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.