ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹೋದರ ಗೋಪಾಲ ಜೋಶಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಒಂದು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಬಿಡುಗಡೆಗೆ ಆದೇಶ ನೀಡಿದೆ.
ಹೌದು ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆಯನ್ನು ಕೈಗೊತ್ತಿಕೊಂಡು, ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅಲ್ಲದೆ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಪ್ರಕರಣ ಹಿನ್ನೆಲೆ?
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ವಿರುದ್ಧ,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 5 ಕೋಟಿಗೆ ಬೇಡಿಕೆ ಇಟ್ಟಿದ್ದರು. ಆದರೆ ದೇವಾನಂದ ದಂಪತಿ 5 ಕೋಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾಗ 2 ಕೋಟಿ ರೂಪಾಯಿ ಹಣ ಪಡೆದಿದ್ದರು.
ಈ ಒಂದು ಡಿಲ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲಿಯೇ ನಡೆದಿತ್ತು ಎಂದು ಹೇಳಲಾಗುತ್ತಿದೆ. ಬಳಿಕ ಗೋಪಾಲ್ ಜೋಶಿ 2 ಕೋಟಿ ಹಣಪಡೆದು ಟಿಕೆಟ್ ನೀಡದೇ ವಂಚಿಸಿದ್ದೂ ಅಲ್ಲದೇ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.