ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಕಾರಣ ಏನೆಂದರೆ ಅತ್ಯಾಚಾರ ಆರೋಪ ನಿಗದಿ ಪಡಿಸಲು ಟ್ರಯಲ್ ನಡೆಸ ಬೇಕಾಗಿತ್ತು. ಆದರೆ ಇದೀಗ ಹೈಕೋರ್ಟ್ ಆರೋಪ ನಿಗದಿ ಮಾಡದಂತೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ
ಹೌದು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಒಂದು ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.ಇದೇ ಜನವರಿ 13 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ನಿಗದಿ ಪ್ರಕ್ರಿಯೆ ಆರಂಭಿಸಲು ದಿನಾಂಕ ನಿಗದಿಯಾಗಿತ್ತು. ಆದರೆ, ಇದೀಗ ಹೈಕೋರ್ಟ್‌ನೊಂದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಜನವರಿ 13ರಂದು ಆರಂಭವಾಗಬೇಕಿದ್ದ ಆರೋಪ ನಿಗದಿ ಪ್ರಕ್ರಿಯೆ ಸದ್ಯ ತಾತ್ಕಾಲಿಕ ಸ್ಥಗಿತವಾಗಿದ್ದು, ಟ್ರಯಲ್ ಎದುರಿಸಬೇಕಿದ್ದ ಪ್ರಜ್ವಲ್ ರೇವಣ್ಣಗೆ ಹೈ ಕೋರ್ಟ್ ಆದೇಶದಿಂದ ಬಿಗ್ ರಿಲೀಫ್ ಸಿಕ್ಕಿದೆ. ಅಲ್ಲದೆ ಮುಂದಿನ ಆದೇಶದವರೆಗೂ ಯಾವುದೇ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬಳಿಕ ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಲಾಯಿತು.