ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯ ನಡೆಸಿದ ಸುಪ್ರೀಂಕೋರ್ಟ್ ಇದೀಗ ವಿಚಾರಣೆಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸಿ ಇದೀಗ ವಿಚಾರಣೆಯನ್ನು ಮುಂದುವರಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನುಸಂಗ್ವಿ ವಾದ ಮಡಿಸುತ್ತಿದ್ದಾರೆ.ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು. ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಇದು ರಾಜಕೀಯ ಪ್ರತಿಭಟನೆ ಎಂದು ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.
ಹಿಂದೂ ಧರ್ಮದ ಕುರಿತು ಶಿಕ್ಷಕಿ ಅವಹೇಳನಕಾರಿ ಹೇಳಿಕೆ ಕೇಸ್ : ಮಂಗಳೂರಲ್ಲಿ ಸರ್ಕಾರದ ವಿರುದ್ಧ VHP ಪ್ರತಿಭಟನೆ
ರಾಜಕೀಯ ಪಕ್ಷಗಳ ಪ್ರತಿಭಟನೆಗೆ ಸೆಕ್ಷನ್ 141 ಹಾಕಲಾಗಿದೆ ಎಂದು ತಿಳಿಸಿದಾಗ ಇದೆ ವೇಳೆ ಪಕ್ಷಗಳ ಪ್ರತಿಭಟನೆ ಎಂದ ಕೂಡಲೇ ಕೇಸ್ ವಜಾ ಮಾಡಬೇಕಾ? ನೀವು ಧರಣಿಗೆ ಅನುಮತಿ ಪಡೆದಿದ್ರಾ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.ಪ್ರತಿಭಟಿಸುವುದು ಮೂಲಭೂತ ಹಕ್ಕು. ಪ್ರತಿಭಟನೆ ಮಾಡುವುದು ಅಪರಾಧವಲ್ಲ ಎಂದು ಕಪಿಲ್ ಸಿಬಲ್ ತಿಳಿಸಿದರು.ಇದೆ ವೇಳೆ ಪ್ರಕರಣದ ಕುರಿತಂತೆ ಆರು ವಾರದೊಳಗೆ ಕಾಲಾವಕಾಶ ನೀಡಿದ್ದು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ?
ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ.
BREAKING: ‘ಸಂದೇಶಖಾಲಿ ಪ್ರಕರಣ’: ಬಂಗಾಳದ ಅಧಿಕಾರಿಗಳ ವಿರುದ್ಧ ಲೋಕಸಭೆ ಸಮಿತಿ ತನಿಖೆಗೆ ಸುಪ್ರೀಂ ಕೋರ್ಟ್ ತಡೆ
ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರಿಗೆ ತಲಾ 10,000 ದಂಡ ವಿಧಿಸಿದ್ದ ಹೈಕೋರ್ಟ್, ಎಲ್ಲರೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು.ಸಿದ್ದರಾಮಯ್ಯ ಅವರ ವಕೀಲ ರಾಜೇಶ್ ಗುಲಾಬ್ ಇನಾಮದಾರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.ಪ್ರತಿಭಟನಾ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರಿಗೂ ಇದರಿಂದ ತೊಂದರೆ ಆಗಿಲ್ಲ. ಈ ಕ್ರಿಮಿನಲ್ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ಮುಂದುವರಿಸುವುದರಿಂದ ಕಾನೂನು ದುರುಪಯೋಗ ಆಗುತ್ತದೆ ಎಂದು ಸಿದ್ದರಾಮಯ್ಯ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕಲ್ಕಿ ಧಾಮ್ ನಂಬಿಕೆಯ ದೊಡ್ಡ ಕೇಂದ್ರವಾಗಲಿದೆ: ಪ್ರಧಾನಿ ನರೇಂದ್ರ ಮೋದಿ