ಬೆಂಗಳೂರು : ನಗರ್ತ ಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟಿಗೆ ತೇಜಸ್ವಿ ಸೂರ್ಯ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಸ್ನೇಹ ಕೃಷ್ಣ ಎಸ್ ದೀಕ್ಷಿತ್ ಅವರು ಇದೀಗ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ? ಎಂದು ಸಂಸದ ತೇಜಸ್ವಿ ಸೂರ್ಯ ಪರ ವಕೀಲರಿಗೆ ಹೈಕೋರ್ಟ್ ಇದೆ ವೇಳೆ ಪ್ರಶ್ನಿಸಿದೆ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲವೆಂದು ತೇಜಸ್ವಿ ಸೂರ್ಯಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರತಿಭಟನೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ನೀಡುವ ತೀರ್ಪು ತೇಜಸ್ವಿ ಕೇಸ್ಗು ಅನ್ವಯವಾಗಬಹುದು ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕೆಎಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಪೀಠ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ?
ನಗರ್ತಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲು ಮಾಡಲಾಗಿದೆ.
ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 149, 188, 283, 290, 268ರಡಿ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಆದರೂ ಸಹ ಮುಖೇಶ್ ಹಲ್ಲೆ ಸಂಬಂಧ ಪ್ರತಿಭಟನೆ ಮಾಡಲಾಗಿತ್ತು.
ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪಕ್ಕೆ ತಿರುಗಿದೆ. ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ನಡೆಸಿದ್ದರು. ಬಳಿಕ ನಗರ್ತ ಪೇಟೆಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭೇಟಿ ನೀಡಿದ್ದು ಈ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿತ್ತು.