ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಿತ್ತು. ಈ ಒಂದು ಸಮನ್ಸ್ ಅನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹೌದು ಈ ಒಂದು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿತ್ತು. ಈ ಒಂದು ಸಮನ್ಸ್ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠವು ಇಡಿ ನೀಡಿದ ಸಮನ್ಸ್ ರದ್ದುಗೊಳಿಸಿ ಆದೇಶ ನೀಡಿದ್ದು, ಈ ಮೂಲಕ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.