ನವದೆಹಲಿ : ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದಲ್ಲಿ ಎಎಪಿಗೆ ಬಿಗ್ ಶಾಕ್ ಸಿಕ್ಕಿದೆ. ಇದುವರೆಗೆ ಎಎಪಿ ಅಭ್ಯರ್ಥಿಗಳು ಎರಡು ರಾಜ್ಯಗಳಲ್ಲಿ ಖಾತೆ ತೆರೆದಿಲ್ಲ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದೆ. ಆದರೆ, ಯಾವುದೇ ಪರಿಣಾಮ ತೋರಿಲ್ಲ.
ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 48 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಜಮ್ಮುಕಾಶ್ಮೀರದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಪಿಡಿಪಿ 4 ಕ್ಷೇತ್ರಗಳಲ್ಲಿ, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.