ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ ದರ್ಶನವರು ನಿನ್ನೆ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬಳಿಕ ಅವರು ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದೀಗ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೆಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಪ್ರಕರಣದ ತನಿಖಾಧಿಕಾರಿಗಳ ಜೊತೆಗೆ ನಿನ್ನೆ ಮಹತ್ವದ ಸಭೆ ನಡೆದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಚರ್ಚಿಸಲಾಗಿದೆ. ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುತ್ತದೆ ಅಭಿಪ್ರಾಯ ಪಡೆದು ದರ್ಶನ್ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಚಿಂತಿಸಲಾಗಿದೆ. ದೀಪಾವಳಿ ಹಬ್ಬದ ಕಾರಣ ಸರ್ಕಾರಿ ರಜೆ ಇದೆ. ಈ ಕಾರಣಕ್ಕೆ ಜಾಮೀನಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ದಾಖಲೆಗಳು ಪೊಲೀಸರ ಕೈಸೇರಿಲ್ಲ. ಸೋವವಾರ ಆದೇಶ ಪ್ರತಿ ಸಿಕ್ಕ ಕೂಡಲೇ ಪೊಲೀಸರಿಂದ ಮಹತ್ವದ ಸಭೆ ನಡೆಯಲಿದೆ.
ಹೈಕೋರ್ಟ್‌ನ ಆದೇಶದ ಪೂರ್ಣ ಪ್ರತಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಇದಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಅಕ್ಟೋಬರ್ 30ರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದ ಜೊತೆ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈಗ ಹೈಕೋರ್ಟ್ ನೀಡಿರುವ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.