ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದೀಗ ಪೊಲೀಸರು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಬಿಜೆಪಿ ಶಾಸಕ ಭೈರತಿ ಬಸವರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನನಗೆ ಯಾವುದು ಮಾಹಿತಿ ಇಲ್ಲ. ಯಾರು ಏನು ಅಂತ ಗೊತ್ತಿಲ್ಲ. ಯಾವುದೊ ದುರುದೇಶದಿಂದ ಈ ರೀತಿ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಪೊಲೀಸರಿಗೆ ಕಂಪ್ಲೇಂಟ್ ಕೊಡುವಾಗ, ನನಗೆ ಮಾಹಿತಿ ಕೇಳಬೇಕಾಗಿತ್ತು ಅಲ್ವಾ? ಏನು ಕೇಳದೆ ನನ್ನ ಮೇಲೆ FIR ದಾಖಲೆ ಮಾಡಿದ್ದಾರೆ. ಈ ವಿಚಾರ ಯಾರು ಏನು ಅಂತ ಮಾಹಿತಿ ಇಲ್ಲ ಅದಕ್ಕೂ ನನಗೂ ಯಾವುದೇ ರೀತಿ ಸಂಬಂಧ ಇಲ್ಲ. ಯಾರು ನನ್ನ ಹೆಸರು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅವರು ಏನು ತನಿಖೆ ಮಾಡುತ್ತಾರೆ ಮಾಡಲಿ ಎಂದರು.
ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ಈ ರೀತಿ ಮಾಧ್ಯಮಗಳಲ್ಲಿ ನನ್ನ ಕುರಿತು ಈ ರೀತಿ ಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನಗೆ ಕೇಳದೆ ನನ್ನ ಮೇಲೆ ಪೊಲೀಸರು FIR ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರ? ನನ್ನ ವಿರುದ್ಧ ಯಾರೂ ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.