ಬೆಂಗಳೂರು : ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಇದರಿಂದ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.
ಹೌದು ಶಾಸಕ ಸ್ಥಾನದಿಂದ ಗಾಲಿ ಜನಾರ್ಧನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.