ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ BMRCL ಬೋರ್ಡ್ ಮೀಟಿಂಗ್ ನಲ್ಲಿ ಟಿಕೆಟ್ ದರ ಏರಿಕೆಗೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯ ಸರ್ಕಾರದ ಅನುಮತಿಗಾಗಿ ನಮ್ಮ ಮೆಟ್ರೋ ಕಾಯುತ್ತಿದೆ.
ನಮ್ಮ ಮೆಟ್ರೋ ಟಿಕೆಟ್ ದರ ಶೇ.5 ರಷ್ಟು ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಫೆ.9ರಂದು ಶೇ. 101.5 ರಷ್ಟು ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಪ್ರಯಾಣಿಕರ ಆಕ್ರೋಶದಿಂದ 3 ದಿನದ ಬಳಿಕ ಶೇ. 71.5ಕ್ಕೆ ಇಳಿಸಲಾಗಿತ್ತು. ಇದೀಗ ಮೆಟ್ರೋ ಪ್ರಯಾಣ ದರ ಏರಿಕೆಗೆ BMRCL ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಕಳೆದ ವರ್ಷ 71% ದರವನ್ನು ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿ ದೇಶದ ಅತ್ಯಂತ ದುಬಾರಿ ಸೇವೆ ನೀಡುವ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಇದೀಗ ಮೆಟ್ರೋ ರೈಲು ನಿರ್ವಹಣೆ ಕಾಯ್ದೆ 2002 ರ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC ಯ ಶಿಫಾರಸುಗಳ ಆಧಾರದ ಮೇಲೆ ಪ್ರತಿ ವರ್ಷ ದರ ಏರಿಕೆ ಮಾಡಲು ಅವಕಾಶವಿದೆ. ಈ ಹಿನ್ನೆಲೆ ಮತ್ತೆ ಟಿಕೆಟ್ ದರ ಏರಿಸಲು ಬಿಎಮ್ಆರ್‌ಸಿಎಲ್ ಒಪ್ಪಿಗೆ ನೀಡಲಾಗಿದೆ.







