ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಮತ್ತೊಬ್ಬ ಆಪ್ತನಿಗೆ ಶಾಕ್ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರಿಗೆ ಇದೀಗ ಕೊಕ್ ನೀಡಲಾಗಿದೆ. ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
ನಸೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದು ಇದೀಗ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಕಟ್ಟುನಿಟ್ಟಿನ ಸೂಚನೆ ಹಾಗೂ ಗಡುವಿನ ಬೆನ್ನಲ್ಲೇ ನಜೀರ್ ಅಹ್ಮದ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನಡೆದಿದ್ದೇನು?
ಸೋಮವಾರ (ಏಪ್ರಿಲ್ 13) ರಂದು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು (ಡೆಡ್ಲೈನ್) ನೀಡಿದ್ದರು. ಅಷ್ಟೇ ಅಲ್ಲದೆ, ಸೋಮವಾರ ಸಂಜೆಯೊಳಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡದಿದ್ದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಕಡೆ ಗಳಿಗೆಯಲ್ಲಿ ಪತ್ರ ರವಾನೆ
ಪಕ್ಷದ ವರಿಷ್ಠರ ಕಠಿಣ ನಿಲುವಿನಿಂದಾಗಿ ಅನಿವಾರ್ಯ ಪರಿಸ್ಥಿತಿ ಎದುರಿಸಿದ ನಜೀರ್ ಅಹ್ಮದ್, ಕೊನೆಗೂ ತಮ್ಮ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ಈ ಹುದ್ದೆಯ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.








