ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಇದೀಗ ಮತ್ತೋರ್ವ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.

ಎಸ್ ಐಟಿ ಅಧಿಕಾರಿಗಳ ಬಳಿ ಹೇಳಿಕೆ ದಾಖಲಿಸಿರುವ ಸಂತ್ರಸ್ತ ಮಹಿಳೆ, ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ. ಹೊಳೆನರಸಿಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಪ್ರಜ್ವಲ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಲು ಕೃತ್ಯ ನಡೆದ ಸ್ಥಳದಲ್ಲಿ ಸಂತ್ರಸ್ತೆಯನ್ನು ಕರೆತರುವ ಸಾಧ್ಯತೆ ಇದೆ.

ಪ್ರಕರಣದ ತನಿಖೆ ನಡೆಸುತ್ತಿರುವ ತಂಡದ ಮುಂದೆ ಶರಣಾಗಲು ಪ್ರಜ್ವಲ್ ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಕರ್ನಾಟಕ ಪೊಲೀಸರ ಎಸ್ಐಟಿ ವರದಿಗಳು ತಿಳಿಸಿವೆ.

33 ವರ್ಷದ ಪ್ರಜ್ವಲ್ ಏಪ್ರಿಲ್ 27 ರಂದು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ದೇಶವನ್ನು ತೊರೆದಿದ್ದು, ಜರ್ಮನಿಯಲ್ಲಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಮಾಜಿ ಮನೆಕೆಲಸಗಾರ್ತಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಪಂಚಾಯತ್ ಮಾಜಿ ಸದಸ್ಯೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎರಡು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಮಹಿಳೆಯನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣ ಅವರನ್ನು ಮೇ 8 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮೂರು ಮಕ್ಕಳ ತಾಯಿಯಾಗಿರುವ ಮಹಿಳೆಯನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ಅವರ ಪುತ್ರ ಎಚ್.ಡಿ.ರೇವಣ್ಣ ಅವರನ್ನು ಎಸ್ಐಟಿ ಶನಿವಾರ ಬಂಧಿಸಿತ್ತು.

Share.
Exit mobile version