ಬೆಂಗಳೂರು: ಐಪಿಎಲ್ 2026ರ ಭರ್ಜರಿ ಫಾರ್ಮ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ. ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಏಪ್ರಿಲ್ 12 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅವರ ಪಾದದ ಕೀಲು (Ankle) ಗಾಯಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಇಂದು (ಏಪ್ರಿಲ್ 15) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಕೊಹ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ಕೊಹ್ಲಿ 38 ಎಸೆತಗಳಲ್ಲಿ 50 ರನ್ ಬಾರಿಸಿ ಮಿಂಚಿದ್ದರು. ಅವರ ಈ ಅದ್ಭುತ ಪ್ರದರ್ಶನದ ನೆರವಿನಿಂದ ಆರ್‌ಸಿಬಿ 18 ರನ್‌ಗಳ ಜಯ ದಾಖಲಿಸಿತ್ತು.
ಒಂದು ವೇಳೆ ಕೊಹ್ಲಿ ಅಲಭ್ಯರಾದರೆ, ಅದು ಆರ್‌ಸಿಬಿ ತಂಡದ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಹೊಡೆತ ನೀಡಲಿದೆ. ಪಂದ್ಯದ ಆರಂಭಕ್ಕೂ ಮುನ್ನ ಅವರ ಫಿಟ್‌ನೆಸ್ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಸತತ ಗೆಲುವಿನ ಓಟದಲ್ಲಿರುವ ಆರ್‌ಸಿಬಿ ತಂಡಕ್ಕೆ ವಿರಾಟ್ ಅವರ ಅಲಭ್ಯತೆ ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.








