ಬೆಂಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರುವಣಿಗೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2 ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮರು ಮತ ಎಣಿಕೆ ನಡೆಯಲಿದೆ. ಚಿಕ್ಕಮಂಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ.
ಟಿಡಿ ರಾಜೇಗೌಡ ಆಯ್ಕೆ ಆಸಿಂದು ಕೋರಿ ಜೀವರಾಜ್ ಅರ್ಜಿ ಸಲ್ಲಿಸಿದ್ದರು. ಜೀವರಾಜ್ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದು, ಏಪ್ರಿಲ್ 6 ರಂದು ಮರು ಎಣಿಕೆಗೆ ಆದೇಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ಎರಡು ವಾರಗಳ ಕಾಲಾವಕಾಶ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಹೈಕೋರ್ಟ್ ಮತ್ತೆ ಆದೇಶ ಮಾಡಿದೆ. 201 ಮತಗಳ ಅಂತರದಿಂದ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದರು.
ಹಿನ್ನೆಲೆ ಏನು?
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.








