ಬೆಂಗಳೂರು : ಸಾರಿಗೆ ಸಿಬ್ಬಂದಿ ಬೆಂಗಳೂರು ಚಲೋ ಮತ್ತು ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇದೀಗ BMTC ಎಂ.ಡಿ ನೋ ವರ್ಕ್ ನೋ ಪೇ ಆದೇಶ ಜಾರಿ ಮಾಡಿದ್ದಾರೆ. ಕರ್ತವ್ಯಕ್ಕೆ ಗೈರಾಗುವ ಬಿಎಂಟಿಸಿ ಸಿಬ್ಬಂದಿಗೆ ಆದೇಶ ಜಾರಿ ಮಾಡಿದ್ದಾರೆ.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ ಬಿ ಶಿವಕುಮಾರ್ ಈ ಒಂದು ಆದೇಶ ಹೊರಡಿಸಿದ್ದಾರೆ. ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಿಬ್ಬಂದಿಗಳು ಮುಷ್ಕರ ಹಾಗೂ ಬೆಂಗಳೂರು ಚಲೋ ಸಿದ್ದತೆ ಮಾಡಿಕೊಂಡಿದ್ದ ಸಾರಿಗೆ ಸಿಬ್ಬಂದಿಗಳಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.








