ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇದೀಗ ರದ್ದುಗೊಳಿಸಿ ಚೆಲುವರಾಜು ಸಲ್ಲಿಸಿದ್ದ ಅರ್ಜಿ ರದ್ದುಪಡಿಸಲು ಹೈ ಕೋರ್ಟ್ ನಿರಾಕರಿಸಿದೆ.
ಪ್ರಕರಣ ಹಿನ್ನೆಲೆ?
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕಳೆದ ಸೆಪ್ಟೆಂಬರ್ 24 2024 ರಂದು ಅರೆಸ್ಟ್ ಮಾಡಲಾಗಿತ್ತು.
ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.