ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಧಾರವಾಡ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಧಾರವಾಡದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜಶೇಖರ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಲ ಪರಿಶೀಲನೆ ನಡೆಸಿದ್ದಾರೆ. ರಾಜಶೇಖರ್ ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿದ್ದು, ಈ ಹಿಂದೆ ಧಾರವಾಡದಲ್ಲೂ ಕಾರ್ಯ ನಿರ್ವಹಿಸಿದ್ದರು. ರಾಜಶೇಖರ್ ಗೆ ಸೇರಿದ 3 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.
ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗೆ ಬೆಳ್ಳಂಬಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ನೀಡಿದ್ದಾರೆ. ಡಿ ಎಚ್ ಓ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಡಿ ಎಚ್ ಒ ಡಾಕ್ಟರ್ ಶಂಕರ್ ನಾಯಕ್ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಕಚೇರಿ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ವಿಜಯನಗರ, ಕೊಪ್ಪಳ ಹಾಗು ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ







