ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಲ್ಗೆ ಬಿಗ್ ಶಾಕ್ ನೀಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.
PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ 5 ಕಡೆ, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಹುಡುಕಾಟ ನಡೆಸಿದ್ದಾರೆ.
ಇನ್ನು ದಾವಣಗೆರೆಯ ಬೆಸ್ಕಾಂನ ಸಿವಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಜುನ್ ವಿರುದ್ಧ ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದ ತಂಡ ದಾಳಿ ನಡೆಸಿದೆ. ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.








