ಮೈಸೂರು : ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮೈಸೂರು, ಕೊಪ್ಪಳ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿಯ ಸಾತಗಳ್ಳಿಯ ಜೆಪಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.