ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದ್ದು, ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಜಾರಿ ನಿರ್ದೇಶನಾಲಯ ಅನುಮತಿ ಪಡೆದಿದೆ.
2021-22ನೇ ಸಾಲಿನ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಡಿಸೆಂಬರ್ 5 ರಂದು ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿಯನ್ನು ಇಡಿ ಕೋರಿತ್ತು.
ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಜಾರಿ ನಿರ್ದೇಶನಾಲಯ ಅನುಮತಿ ಪಡೆದಿದೆ ಎಂದು ಹೇಳಲಾಗಿದೆ.