ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಇದೀಗ ವಾಕ್ಸಮರ ತಾರಕಕ್ಕೆ ಏರಿದ್ದು, ಇದರ ಮಧ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಹಾಗೂ ಎಸ್ಐಟಿ ಅಧಿಕಾರಿಗಳು ಎಚ್ ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿಗೆ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹೌದು ಕುಮಾರಸ್ವಾಮಿಯವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಜಾಮೀನೀನಲ್ಲಿ ಹೊರಗಡೆ ಇದ್ದಾರೆ. ಹೀಗಾಗಿ ಈ ಒಂದು ಜಾಮೀನನ್ನು ರದ್ದುಗೊಳಿಸಿ ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಹಾಗೂ ಎಸ್ಐಟಿ ಇಂದ ಹೆಚ್‍ಡಿ ಕುಮಾರಸ್ವಾಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತಹ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಗಂಗೇನಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.