ನವದೆಹಲಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಎಫ್‌ಡಿಎ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಕರಣಕ್ಕೆ ಸಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ FDA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು.
ಏನಿದು ಪ್ರಕರಣ?
ಕರ್ನಾಟಕದಾದ್ಯಂತ 2023 ರ ಅಕ್ಟೋಬರ್ 28 ರಂದು ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿರು. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು, ಹಲವರನ್ನು ಬಂಧಿಸಿದ್ದರು.
ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಕೂಡ ಆರ್‌ಡಿ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಕಾಲೇಜು ಆಡಳಿತ ಮಂಡಳಿಗಳ ಜತೆ ಕೈಜೋಡಿಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಉತ್ತರಗಳನ್ನು ಬ್ಲೂಟೂಥ್ ಡಿವೈಸ್ ಮೂಲಕ ಕಳುಹಿಸುತ್ತಿದ್ದ ಎಂಬ ಮಾಹಿತಿಯೂ ನಂತರದಲ್ಲಿ ಬೆಳಕಿಗೆ ಬಂದಿತ್ತು.ಅಕ್ರಮದ ವಿಚಾರಣೆ ವೇಳೆ, ಪ್ರಕರಣದ ಕಿಂಗ್ಪಿನ್ ಆರ್‌ಡಿ ಪಾಟೀಲ್ ಹೆಸರು ಹೊರಬಿದ್ದಿತ್ತು. ನಂತರ ಆತನನ್ನು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಯ ಹೊಣೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿತ್ತು.