ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇಕಡ 15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ.ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು.
ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು. ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿಎಲ್ಲಾ ನಾಲ್ಕು ಸಾರಿಗೆ ನಿಗಮಗಳಲ್ಲಿ ಶೇಕಡ 15ರಷ್ಟು ಟಿಕೆಟ್ ದರ ಏರಿಕೆ ಮಾಡಿ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.