ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರು ರಾಜ್ಯದ ಜನತೆಗೆ ಬಿಗ್ ಶಾಕ್, ಇಂದಿನಿಂದ ಜಾರಿಗೆ ಬರುವಂತೆ ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ರಾಜ್ಯದಲ್ಲಿ ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ ನಂದಿನಿ ಬ್ರ್ಯಾಂಡ್ನ ತುಪ್ಪದ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಮೊದಲು 610 ರೂ.ಗೆ ಮಾರಾಟವಾಗುತ್ತಿದ್ದ ಒಂದು ಲೀಟರ್ ತುಪ್ಪ ಈಗ ನೇರವಾಗಿ 700 ರೂ.ಗೆ ನಿಗದಿಯಾಗಿದೆ. ಅಂದರೆ, ಬರೋಬ್ಬರಿ 90 ರೂಪಾಯಿ ಏರಿಕೆಯಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ.ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








