Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: ಬಿಜೆಪಿಗೆ ಜಿಗಿದ 7 ಸಂಸದರ ಅನರ್ಹತೆಗೆ ಸಭಾಪತಿಗಳಿಗೆ ‘ಆಪ್’ ಮೊರೆ!

26/04/2026 6:40 PM

Mann ki Baat: ಅಳಿವಿನ ಅಂಚಿನಲ್ಲಿದ್ದ ‘ಗ್ರೇಟ್ ಇಂಡಿಯನ್ ಬಸ್ಟರ್ಡ್’ಗೆ ಮರುಜೀವ: ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 6:30 PM

​’ವಂಶಪಾರಂಪರ್ಯ ರಾಜಕಾರಣಕ್ಕಿಂತ ದತ್ತಾಂಶಕ್ಕೇ ಆದ್ಯತೆ’: ರಾಹುಲ್ ಗಾಂಧಿಗಿಂತ ಮೋದಿಗೇ ‘ಗ್ರೋಕ್’ ಎಐ ಬೆಂಬಲ!

26/04/2026 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ
INDIA

BREAKING : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

By kannadanewsnow0514/10/2025 12:57 PM

ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇದೀಗ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಇದೀಗ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಫಲಿತಾಂಶವನ್ನು ಮುಚ್ಚಿದಲಕೋಟೆಯಲ್ಲಿ ಸಲ್ಲಿಸಲು ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್​​ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ.

ಹೀಗಾಗಿ, ನಂಜೇಗೌಡರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ರದ್ದುಪಡಿಸಬೇಕು. ಅಷ್ಟೇ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಅವರು ಕಾಂಗ್ರೆಸ್​ ಅಭ್ಯರ್ಥಿ ಕೆ.ವೈ.ನಂಜೇಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಸೋತಿದ್ದರು.

ಬಳಿಕ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಹೈಕೋರ್ಟ್ ರದ್ದುಪಡಿಸಿ ಮಹತ್ವದ ಆದೇಶ ನೀಡಿತ್ತು. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ನಿರ್ದೇಶನ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

Share. Facebook Twitter LinkedIn WhatsApp Email

Related Posts

ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: ಬಿಜೆಪಿಗೆ ಜಿಗಿದ 7 ಸಂಸದರ ಅನರ್ಹತೆಗೆ ಸಭಾಪತಿಗಳಿಗೆ ‘ಆಪ್’ ಮೊರೆ!

26/04/2026 6:40 PM1 Min Read

Mann ki Baat: ಅಳಿವಿನ ಅಂಚಿನಲ್ಲಿದ್ದ ‘ಗ್ರೇಟ್ ಇಂಡಿಯನ್ ಬಸ್ಟರ್ಡ್’ಗೆ ಮರುಜೀವ: ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 6:30 PM1 Min Read

​’ವಂಶಪಾರಂಪರ್ಯ ರಾಜಕಾರಣಕ್ಕಿಂತ ದತ್ತಾಂಶಕ್ಕೇ ಆದ್ಯತೆ’: ರಾಹುಲ್ ಗಾಂಧಿಗಿಂತ ಮೋದಿಗೇ ‘ಗ್ರೋಕ್’ ಎಐ ಬೆಂಬಲ!

26/04/2026 6:20 PM1 Min Read
Recent News

ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: ಬಿಜೆಪಿಗೆ ಜಿಗಿದ 7 ಸಂಸದರ ಅನರ್ಹತೆಗೆ ಸಭಾಪತಿಗಳಿಗೆ ‘ಆಪ್’ ಮೊರೆ!

26/04/2026 6:40 PM

Mann ki Baat: ಅಳಿವಿನ ಅಂಚಿನಲ್ಲಿದ್ದ ‘ಗ್ರೇಟ್ ಇಂಡಿಯನ್ ಬಸ್ಟರ್ಡ್’ಗೆ ಮರುಜೀವ: ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 6:30 PM

​’ವಂಶಪಾರಂಪರ್ಯ ರಾಜಕಾರಣಕ್ಕಿಂತ ದತ್ತಾಂಶಕ್ಕೇ ಆದ್ಯತೆ’: ರಾಹುಲ್ ಗಾಂಧಿಗಿಂತ ಮೋದಿಗೇ ‘ಗ್ರೋಕ್’ ಎಐ ಬೆಂಬಲ!

26/04/2026 6:20 PM

​ಬ್ರೆಜಿಲ್ ವಿಶ್ವ ಚೀಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ‘ಸೂಪರ್ ಗೋಲ್ಡ್’ ಪದಕ: ದೇಶದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ

26/04/2026 6:17 PM
State News
KARNATAKA

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

By kannadanewsnow0526/04/2026 1:34 PM KARNATAKA 1 Min Read

ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ಇಂದು ಗೌರವ ಘಟನೆ ಒಂದು ನಡೆದಿದ್ದು , ಗುಂಡು ಹಾರಿಸಿಕೊಂಡು ಸರ್ಕಾರಿ…

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

​ಪುಸ್ತಕಗಳು ಕೇವಲ ದಾಖಲೆಗಳಲ್ಲ, ಅವು ಸಂಸ್ಕೃತಿಯ ಜೀವಂತಿಕೆ: ಶಾಸಕ ಗೋಪಾಲಕೃಷ್ಣ ಬೇಳೂರು

26/04/2026 1:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.