ಬೆಂಗಳೂರು : ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಿವೈ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್ ಅವರಿಗೆ ಹೈಕಮಾಂಡ್ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು ತಿಂಗಳ ಹಿಂದೆಯೂ ನೋಟಿಸ್ ನೀಡಲಾಗಿತ್ತು.
ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೇಳಲಾಗಿದೆ. ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.