ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಶವಗಳನ್ನು ಹೂತಿಟ್ಟಿರುವ ಬಗ್ಗೆ ದೂರುದಾರನ ಪರವಾಗಿ 6 ಮಂದಿ ಸ್ಥಳೀಯರು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ.
ದಕ್ಷಿಣ ಕನ್ನಡದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮತ್ತೆ ಶೋಧ ಕಾರ್ಯ ಆರಂಭವಾಗಲಿದೆ. ಪಾಯಿಂಟ್ ನಂಬರ್ 13ನೇ ಜಾಗದಲ್ಲಿ ಎಸ್ಐಟಿ ಶೋಧ ಕಾರ್ಯ ಮುಂದುವರಿಸಲಿದೆ.
ಕೆಲವೇ ಕ್ಷಣಗಳಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಲಿದೆ ಪಾಯಿಂಟ್ ನಂಬರ್ 13 ರಿಂದ ಇಂದು ಎಸ್ಐಟಿ ತಂಡ ಶೋಧ ಆರಂಭಿಸಲಿದೆ. ಈಗಾಗಲೇ ದೂರುದಾರ ಗುರುತಿಸಿದ 13 ಪಾಯಿಂಟ್ ಗಳಿಗೂ ಕೂಡ ಭದ್ರತೆ ಒದಗಿಸಲಾಗಿದೆ. ಬಾಕಿ ಉಳಿದಿರುವ ಕೊನೆಯ ಪಾಯಿಂಟ್ ನತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ.
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೆರಡು ಹೊಸ ದೂರುಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸಲಿದೆ.
ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತದೇಹವೊಂದನ್ನು ಹೂತು ಹಾಕಿದ್ದಾರೆ ಎಂದು ಜಯಂತ ಎಂಬುವರು ಧರ್ಮಸ್ಥಳ ಠಾಣೆಗೆ ದೂರು ಸಲ್ಲಿಸಿದ್ದರು. ಜೊತೆಗೆ, ಜು.31ರಂದು ಆರನೇ ಸ್ಥಳದಲ್ಲಿ ಉತ್ಪನನ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಕ್ಕೆಸಂಬಂಧಪಟ್ಟಂತೆ ಆ.1ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಈ ಎರಡೂ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಡಿಜಿಪಿ ಹಾಗೂ ಐಜಿಪಿ ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.