ಬೆಂಗಳೂರು : ಭೋವಿ ನಿಗಮದ ಹಗರಣದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ 2,300 ಪುಟಗಳ ತನಿಖಾ ವರದಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ವಕೀಲೆ ಜೀವಾಗೆ ಚಿತ್ರಹಿಂಸೆ ನೀಡಿದ್ದು, ವಿವಸ್ತ್ರಗೊಳಿಸಿ ಹಿಂಸಿಸಿ, ವಿಡಿಯೋ ಮಾಡಿ ಬಳಿಕ ಎಫ್ ಎಸ್ ಮೂಲಕ ಅದನ್ನು ಡಿಲಿಟ್ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ. ವಕೀಲೆ ಜೀವಾ ಡಿವೈಎಸ್ ಪಿ ಕನಕಲಕ್ಷ್ಮಿ ತನ್ನನ್ನು ವಿಚಾರಣೆ ನೆಪದಲ್ಲಿ ಕರೆದು ಚಿತ್ರಹಿಂಸೆ ನೀಡಿದ್ದಾರೆ. ನನ್ನ ಆತ್ಮಹತ್ಯೆಗೆ ಡಿವೈಎಸ್ ಪಿ ಕನಕಲಕ್ಷ್ಮೀಯೇ ಕಾರಣ ಎಂದು 13 ಪುಟಗಳ ಡೆತ್ ನೋಟ್ ಬರೆದಿಟ್ಟು ವಕೀಲೆ ಜೀವಾ 2024ರ ನ.22ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಸಿಬಿಐ ಅಧಿಕಾರಿಗಳು ಒಳಗೊಂಡಂತೆ ಎಸ್ಐಟಿ ರಚನೆ ಮಾಡಿ ಹೈಕೋರ್ಟ್ ತನಿಖೆಗೆ ಆದೇಶಿಸಿತ್ತು. ಮಾ.11ರಂದು ಡಿವೈಎಸ್ ಪಿ ಕನಕಲಕ್ಷ್ಮೀಯನ್ನು ಬಂಧಿಸಲಾಗಿತ್ತು.
ಪ್ರಕರಣ ಹಿನ್ನೆಲೆ?
ಜೀವಾ ಅವರು 2024 ನವೆಂಬರ್ 22ರಂದು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ನಲ್ಲಿ ಡಿವೈಎಸ್ಪಿ ಕನಕಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಮೃತರ ಸಹೋದರಿ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಮತ್ತೊಂದೆಡೆ, ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರತ್ಯೇಕ ಎಸ್ಐಟಿ ರಚಿಸಿತ್ತು.
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ವರ್ಮಾ, ಕರ್ನಾಟಕ ಹೋಮ್ ಗಾರ್ಡ್‌ನ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸೇರಿದಂತೆ ಮೂವರು ಅಧಿಕಾರಿಗಳ ವಿಶೇಷ ತಂಡ ತನಿಖೆ