ಮಂಗಳೂರು : ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಆದರೆ ಈ ಒಂದು ಪ್ರಕರಣಕ್ಕೆ ಇದೀಗ ಸ್ಪೋಟಕವಾದ ಟ್ವಿಸ್ಟ್ ಸಿಕ್ಕಿದ್ದು ಆತ್ಮಹತ್ಯೆಗೆ ಮಹಿಳೆಯ ಕಿರುಕುಳವೇ ಕಾರಣ ಎಂದು ಹೇಳಲಾಗುತ್ತಿದೆ.
ಹೌದು ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಮಹಿಳೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯಿಂದ ಮುಮ್ತಾಜ್ ಅಲಿಗೆ ನಿರಂತರವಾಗಿ ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಮದುವೆ ಆಗುವಂತೆ ಮುಮ್ತಾಜಿಗೆ ಮಹಿಳೆ ಪಿಡಿಸುತ್ತಿದ್ದಳು ಎಂಬ ಗುಮಾನಿ ಕೇಳಿಬಂದಿದೆ.
ಅಲ್ಲದೆ ಮಹಿಳೆಯ ಬ್ಲಾಕ್ ಮೆಲ್ ಗೆ ನಾಲ್ವರು ಸಹಕಾರ ಕೊಟ್ಟಿದ್ದಾರೆ. ಸೂರತ್ಕಲ್ ಮೂಲದ ನಾಲ್ವರ ಬ್ಲಾಕ್ ಮೆಲ್ ಗೆ ಸಹಕಾರ ನೀಡಿರುವ ಗುಮಾನಿ ಎದ್ದಿದೆ. ಮಸೀದಿ ಕಮಿಟಿ ವಿಚಾರದಲ್ಲಿ ಮುಮ್ತಾಜ್ ನಾಲ್ವರ ಜೊತೆ ಗಲಾಟೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೆ ವಿಚಾರಕ್ಕೆ ಗಲಾಟೆ ಜಿದ್ದಿನಿಂದಲೇ ನಡೆದು ಮಹಿಳೆಯ ಜೊತೆ ಸೇರಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಹಿನ್ನೆಲೆ?
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮುಮ್ತಾಜ್ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮೊಯ್ದಿನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.