ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆಯಲ್ಲಿ ಒಳಜಗಳ ಶುರುವಾಗಿದೆ ಎಂಬ ವದಂತಿಗಳು ಹಬ್ಬಿವೆ. ಪಕ್ಷದ ಒಟ್ಟು 47 ಶಾಸಕರಲ್ಲಿ ಹೆಚ್ಚಿನವರು, ಮುಂಬರುವ ಸರ್ಕಾರ ರಚನೆಗಾಗಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷಕ್ಕೆ ಬೆಂಬಲ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯಿಂದಾಗಿ ಎಐಎಡಿಎಂಕೆ ಶಾಸಕರ ಪ್ರಮುಖ ಸಭೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಈ ಅತೃಪ್ತ ಶಾಸಕರ ನೇತೃತ್ವ ವಹಿಸಿದ್ದು, ಅವರ ಮನೆಯಲ್ಲೇ ಒಂದು ಪ್ರಮುಖ ಸಭೆ ನಡೆಯುವ ಸಾಧ್ಯತೆಯಿದೆ.
ಇನ್ನೊಂದೆಡೆ, ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ಪರೋಕ್ಷವಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ. ಒಂದು ವೇಳೆ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳದಿದ್ದರೆ, 30ಕ್ಕೂ ಹೆಚ್ಚು ಶಾಸಕರು ಪಕ್ಷದಿಂದ ಹೊರಬಂದು ವಿಜಯ್ ಅವರಿಗೆ ಬೆಂಬಲ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.








