ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆಗೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಜನಾರ್ದನ ರೆಡ್ಡಿ ಮನೆ ಮೇಲೆ ದಾಳಿ ಮಾಡಲು ಮೊದಲೇ ಪ್ಲಾನ್ ಮಾಡಿಕೊಳ್ಳಲಾಗಿತ್ತು. ಪ್ಲಾನ್ ಮಾಡಿಕೊಂಡೆ ಪುಂಡರ ಗುಂಪು ಮನೆಯ ಬಳಿ ಬಂದಿತ್ತು. ಪೆಟ್ರೋಲ್ ಬಾಂಬ್ ಮತ್ತು ಬಾಟಲ್ ಗಳನ್ನು ತುಂಬಿಸಿಕೊಂಡು ಬಂದಿದ್ದರು. ಇದಕ್ಕೆ ಆಟೋದಲ್ಲಿ ಪೆಟ್ರೋಲ್ ಬಾಂಬ್ ಬಾಟಲಿಗಳು ತಂದಿರುವ ದೃಶ್ಯ ವೈರಲ್ ಆಗಿದೆ. ಗಲಾಟೆ ಸಂದರ್ಭದಲ್ಲಿ ಪೆಟ್ರೋಲ್ ಬಂ ಮತ್ತು ಬಾಟಲಿಗಳನ್ನು ಬಳಸಿರುವುದು ತನಿಖೆಯಲ್ಲಿ ಬಯಲಾಗಿದೆ.
ಇನ್ನು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು, ಗುರುಚರಣ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಗನ್ ಮ್ಯಾನ್ ಗಳಾದ ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಾಗಿದ್ದಾರೆ. ಸತೀಶ್ ರೆಡ್ಡಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಪ್ತರಾಗಿದ್ದಾರೆ..








