ಕೋಲಾರ : ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಶವವಾಗಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಬಾಲಕಿಯರ ಸಾವಿನ ರಹಸ್ಯ ಬಯಲಾಗಿದೆ.
ಡೆತ್ ನೋಟ್ ಬರೆದಿಟ್ಟು ಇಬ್ಬರು ಬಾಲಕಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮನನೊಂದು ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕರು ಇಬ್ಬರು ಬಾಲಕಿಯರ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದರು.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರ ಶವ ಪತ್ತೆಯಾಗಿತ್ತು. ಅಕ್ಟೋಬರ್ 2 ರಂದು ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಇಂದ ಧನ್ಯ ಬಾಯಿ (13) ಹಾಗೂ ಚೈತ್ರಾ ಬಾಯಿ (13) ನಾಪತ್ತೆಯಾಗಿದ್ದರು.
ಅಕ್ಟೋಬರ್ 4 ರಂದು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಬಾಲಕಿಯರು ಬ್ಯಾಗ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.