ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ SIT ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ.
ಹೌದು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಚೆನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿಸಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಅಲ್ಲದೆ ಈ ಒಂದು ಗ್ಯಾಂಗ್ ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯವರನ್ನು ಸಹ ಭೇಟಿ ಮಾಡಿದರು ಎಂದು ಮತ್ತೊಂದು ಸ್ಪೋಟಕ ಅಂಶ ಬೆಳಕಿಗೆ ಬಂದಿದೆ.