Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಡಾ ಸೈಟ್ ಹಂಚಿಕೆ ಕೇಸ್ ಗೆ ಬಿಗ್ ಟ್ವಿಸ್ಟ್ : `CS ಶಾಲಿನಿ ರಜನೀಶ್’ ವಿರುದ್ಧ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ !
KARNATAKA

BREAKING : ಮುಡಾ ಸೈಟ್ ಹಂಚಿಕೆ ಕೇಸ್ ಗೆ ಬಿಗ್ ಟ್ವಿಸ್ಟ್ : `CS ಶಾಲಿನಿ ರಜನೀಶ್’ ವಿರುದ್ಧ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ !

By kannadanewsnow57

ಬೆಂಗಳೂರು : ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತರಾದ ಡಿ.ಬಿ.ನಟೇಶ್ ರವರು, ಬಡ್ತಿ ಪಡೆಯುವ ಸಲುವಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ರವರಿಗೆ ಕೋಟ್ಯಾಂತರ ರೂಪಾಯಿ ಹಣ ಕೊಡುತ್ತಿದ್ದಾರೆ, ಈ ಹಣದ ವ್ಯವಹಾರ ದಿನಾಂಕ :-09.02.2026 ರಂದು, ಮೈಸೂರಿನಲ್ಲಿ ನಡೆಯುತ್ತಿದೆ, ಶಾಲಿನಿ ರಜನೀಶ್ ಕಡೆಯವರು ಮೈಸೂರಿಗೆ ಬಂದು ಹಣ ಪಡೆಯುತ್ತಿದ್ದಾರೆ, ಯಾವ ಸಂಖ್ಯೆಯ ವಾಹನದಲ್ಲಿ ಹಣ ವರ್ಗಾವಣೆ ಆಗುತ್ತಿದೆ, ಮುಂತಾದ ಮಾಹಿತಿ ದೊರೆತಿತ್ತು. ನಾನು ಬೆಂಗಳೂರಿನಲ್ಲಿ ಇದ್ದುದ್ದರಿಂದ ಮತ್ತು ಸ್ಪಷ್ಟವಾದ ಸ್ಥಳದ ಮಾಹಿತಿ ದೊರೆತಿರಲಿಲ್ಲವಾದ್ದರಿಂದ, ಆ ಕೂಡಲೇ ಈ ಹಣದ ವಹಿವಾಟನ್ನು ಪತ್ತೆ ಮಾಡಲಾಗಲಿಲ್ಲ. ಇದಾದ ನಾಲ್ಕು ದಿನಗಳಲ್ಲೇ ನಟೇಶ್ ರವರಿಗೆ ಬಡ್ತಿ ನೀಡಲಾಗಿದೆ ! ಈ ಬಗ್ಗೆ ಶ್ರೀಮತಿ ಶಾಲಿನಿ ರಜನೀಶ್ ರವರಿಗೆ ಸ್ಪಷ್ಟೀಕರಣ ಕೋರಿ ಮನವಿ ಪತ್ರ ಕಳಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಬರೆದ ಪತ್ರದಲ್ಲಿ ಏನಿದೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿದ್ದ ಡಿ.ಬಿನಟೇಶ್‌ರವರು ಸರ್ಕಾರದ ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡು, ಕಲಂ 13(1)(ಎ) ಭ್ರಷ್ಟಚಾರ ಪ್ರತಿಬಂಧಕ ಕಾಯಿದೆ 1988 (ತಿದ್ದುಪಡಿ ಕಾಯಿದೆ 2018) ರೀತ್ಯಾ ಅಪರಾಧ ಕೃತ್ಯ ಎಸಗಿದ್ದಾರೆ ಎಂದು ತನಿಖಾಧಿಕಾರಿ ತಿಳಿಸಿದ್ದರೂ ಕೂಡ, ಸದರಿ ಡಿ.ಬಿ.ನಟೇಶ್‌ರವರನ್ನು ಕೂಡಲೇ ಅಮಾನತ್ತು ಮಾಡದೆ, ಇಲಾಖಾ ವಿಚಾರಣೆಗೆ ಒಳಪಡಿಸಿ, ವರದಿ ಪಡೆದುಕೊಂಡು ಸರ್ಕಾರದ ಕೆಲಸದಿಂದ ವಜಾ ಮಾಡದೆ, ವ್ಯತಿರಿಕ್ತವಾಗಿ ನಡೆದು ಕೊಂಡು, ಕೋಟ್ಯಾಂತರ ರೂಪಾಯಿ ಹಣವನ್ನು ನಟೇಶ್‌ರವರಿಂದ ಪಡೆದು, ಬಡ್ತಿ ಕೊಡಿಸುವ ಮೂಲಕ ಅಕ್ರಮ, ಭ್ರಷ್ಟಚಾರ ನಡೆಸಿ, ಸಾರ್ವಜನಿಕರ (ಸರ್ಕಾರದ) ಆಸ್ತಿಯನ್ನು ಕಬಳಿಸಿರುವವರಿಗೆ ಪರೋಕ್ಷವಾಗಿ ರಕ್ಷಣೆ ಮಾಡುತ್ತಿರುವ ನಿಮ್ಮ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಸಂಬಂಧ, ನಿಮ್ಮಿಂದ ಸ್ಪಷ್ಟಿಕರಣ ಮತ್ತು ದೃಢೀಕೃತ ದಾಖಲೆಗಳನ್ನು ನೀಡಲು ಕೋರಿ ಮನವಿ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ, ಸರ್ಕಾರದ ಮುಖ್ಯಸ್ಥರಾಗಿ ಸಾರ್ವಜನಿಕರ (ಸರ್ಕಾರದ) ಆಸ್ತಿಯನ್ನು ರಕ್ಷಣೆ ಮಾಡದೆ, ಸಾರ್ವಜನಿಕರ (ಸರ್ಕಾರದ) ಆಸ್ತಿಯನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಮಾಡಿಕೊಳ್ಳುವವರ ವಿರುದ್ದ ತುರ್ತು ಕ್ರಮಗಳನ್ನು ತೆಗೆದುಕೊಳ್ಳದೆ, ಅಕ್ರಮ, ಭ್ರಷ್ಟಚಾರ ನಡೆಸಿರುವವರಿಗೆ ಪರೋಕ್ಷವಾಗಿ ರಕ್ಷಣೆ ಮಾಡುತ್ತಿರುವ ಮತ್ತು ಗಂಭೀರ ಆರೋಪ ಹೊತ್ತಿರುವ ಡಿ.ಬಿ.ನಟೇಶ್‌ರವರಿಂದ (ಸದರಿ ಡಿ.ಬಿ.ನಟೇಶ್‌ರವರು ಹಾಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಾಗಿದ್ದಾರೆ) ನೀವು ಕೋಟ್ಯಾಂತರ ರೂಪಾಯಿ ಲಂಚ ಪಡೆದು, ಅವರಿಗೆ ಬಡ್ತಿಯನ್ನು ಕೊಡಿಸಿದ್ದೀರಿ ಎಂಬ ಆರೋಪದ ಬಗ್ಗೆ ನಿಮ್ಮ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾನ್ಯ ಉಚ್ಚ ನ್ಯಾಯಾಲಯ ದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿರುತ್ತೇನೆ. ಆದ್ದರಿಂದ ಈ ಕೆಳಕಂಡ ಅಂಶಗಳಿಗೆ ನಿಮ್ಮಿಂದ ಸ್ಪಷ್ಟಿಕರಣ ಮತ್ತು ದೃಢೀಕೃತ ದಾಖಲೆಗಳನ್ನು ಕೋರುತ್ತಿದ್ದೇನೆ ಎಂದು ಮನವಿ ಮಾಡಿದ್ದಾರೆ.

BREAKING: Big twist in the Muda site allocation case: Snehamayi Krishna's new bombshell against `CS Shalini Rajneesh'!
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.