ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ತಂದೆಯೇ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.
ಹೌದು 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಗಂಡ-ಹೆಂಡತಿಯ ನಡುವಿನ ಅನೈತಿಕ ಸಂಬಂಧದ ಜಗಳದಿಂದ ಬಾಲಕಿಯ ತಂದೆಯೇ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.
ಜ್ವರ ಹಿನ್ನೆಲೆಯಲ್ಲಿ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿ ಇದ್ದಳು. ತಾಯಿ ಜಮೀನು ಕೆಲಸ ಮುಗಿಸಿ ಮನೆಗೆ ಬಂದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.