ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 6 ಮೋಸ್ಟ್ ವಾಂಟೆಡ್ ನಕ್ಸಲರ ಶರಣಾಗತಿಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಸಿಎಂ ಹಾಗೂ ಗೃಹ ಸಚಿವರ ಮುಂದೆ ಶರಣಾಗತಿಯಾಗಲಿದ್ದಾರೆ.
ಕೊನೆಯ ಕ್ಷಣದಲ್ಲಿ ಶರಣಾಗತಿ ದಿಢೀರ್ ಬದಲಾವಣೆ ಆಗಿದ್ದು, ಬಾಳೆಹೊನ್ನೂರಿನಿಂದ 6 ನಕ್ಸಲರು ಬೆಂಗಳೂರಿಗೆ ಆಗಮಿಸುತ್ತಿದ್ದು, ಬಳಿಕ ಸಿಎಂ ಹಾಗೂ ಗೃಹ ಸಚಿವರ ಸಮ್ಮುಖದಲ್ಲೇ ಶರಣಾಗತಿಯಾಗಲಿದ್ದಾರೆ.
ನಿನ್ನೆ ಶಾಂತಿಗಾಗಿ ನಾಗರಿಕ ವೇದಿಕೆಯು ರಾಜ್ಯ ಸರ್ಕಾರದೊಂದಿಗೆ ನಡೆಸಿದ ಸುದೀರ್ಘ ಮಾತುಕತೆ ಫಲಪ್ರದವಾಗಿದ್ದು ಇಂದು ಆರು ಜನ ನಕ್ಸಲ್ ಹೋರಾಟಗಾರರು ಮುಖ್ಯ ವಾಹಿನಿಗೆ ಬಂದಿದ್ದಾರೆ. ಪ್ರಮುಖವಾಗಿ ಮುಂಡಗಾರು ಲತಾ, ಸುಂದರಿ ಕುಟ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ಕೆ ವಸಂತ, ಟಿ ಎನ್ ಜೀಶ್ ಅವರು ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದಾರೆ.